ಪತಂಜಲಿ ಉತ್ಪನ್ನಗಳಲ್ಲಿ ಅಪಾಯಕಾರಿ ರಾಸಾಯನಿಕ ಪತ್ತೆ. ಈ ಬಗ್ಗೆ ಸಂಸ್ಥೆ ಪ್ರತಿಕ್ರಿಯೆ ಏನು?

ಶುಕ್ರವಾರ, 12 ಅಕ್ಟೋಬರ್ 2018 (10:22 IST)
ನವದೆಹಲಿ : ಸ್ವದೇಶಿ ಉತ್ಪನ್ನಗಳ ಸಂಸ್ಥೆಯಾದ  ಪಂತಾಜಲಿ ಹೆಸರಿಗೆ ಮಸಿ ಬಳಿಯುವ ಕೆಲಸ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ ಎಂಬುದಾಗಿ ತಿಳಿದುಬಂದಿದೆ.


ವಿವೇಕ್ ಪಾಂಡೆ ಎಂಬುವವರ ಟ್ವೀಟರ್ ಅಕೌಂಟ್‌ನಲ್ಲಿ ಪತಂಜಲಿ ಉತ್ಪನ್ನಗಳಲ್ಲಿ ಅಪಾಯಕಾರಿ ರಾಸಾಯನಿಕ ಪತ್ತೆಯಾದ ಹಿನ್ನೆಲೆಯಲ್ಲಿ ಪತಂಜಲಿ ಉತ್ಪನ್ನಗಳ ಮೇಲೆ ಕತಾರ್ ನಿರ್ಬಂಧ ಹೇರಿದೆ ಎಂದು ಪೋಸ್ಟ್ ಮಾಡಿದ್ದರು.


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪತಂಜಲಿ ವಕ್ತಾರ ಎಸ್.ಕೆ.ತಿಜರವಾಲಾ ದಾಖಲೆ ಸಮೇತ ಸ್ಪಷ್ಟನೆ ನೀಡಿದ್ದು ಯಾರೋ ದುರುದ್ದೇಶದಿಂದ ಸಂಸ್ಥೆಯ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ