ಮುಂಬೈ: ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11 ಪೈಸೆ ಕುಸಿತ ಕಂಡು 67.59 ರೂಪಾಯಿ ಮೌಲ್ಯಕ್ಕೆ ತಲುಪಿದೆ.
ಸಾಗರೋತ್ತರ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರ ಹರಿವು ಹೆಚ್ಚಳವಾದ ಪರಿಣಾಮ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ರೂಪಾಯಿ ಮೌಲ್ಯದಲ್ಲಿ ಕುಸಿತ ಕಂಡಿದೆ ಎಂದು ಮಾರುಕಟ್ಟೆ ವರ್ತಕರು ತಿಳಿಸಿದ್ದಾರೆ.
ಮಂಗಳವಾರದ ವಹಿವಾಟಿನ ಮುಕ್ತಾಯಕ್ಕೆ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 17 ಪೈಸೆ ಕುಸಿತ ಕಂಡು 67.48 ರೂಪಾಯಿ ತಲುಪಿತ್ತು.
ಏತನ್ಮಧ್ಯೆ ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸಂವೇದಿ ಸೂಚ್ಯಂಕ 30.41 ಪಾಯಿಂಟ್‌ಗಳಷ್ಟು ಚೇತರಿಕೆ ಕಂಡು 26,843.19 ಅಂಕಗಳಿಗೆ ತಲುಪಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.