ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತ

ಸೋಮವಾರ, 2 ಮೇ 2016 (15:24 IST)
ಮುಂಬೈ: ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 8 ಪೈಸೆ ಕುಸಿತ ಕಂಡು 66.41 ರೂಪಾಯಿ ಮೌಲ್ಯಕ್ಕೆ ತಲುಪಿದೆ.
ಸಾಗರೋತ್ತರ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರ ಹರಿವು ಹೆಚ್ಚಳವಾದ ಪರಿಣಾಮ ರೂಪಾಯಿ ಮೌಲ್ಯದಲ್ಲಿ ಕುಸಿತ ಕಂಡಿದೆ ಎಂದು ಮಾರುಕಟ್ಟೆ ವರ್ತಕರು ತಿಳಿಸಿದ್ದಾರೆ.
 
ಶುಕ್ರವಾರದ ವಹಿವಾಟಿನ ಮುಕ್ತಾಯಕ್ಕೆ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ಗಳ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 19 ಪೈಸೆ ಹೆಚ್ಚಳವಾಗಿ 66.33 ರೂಪಾಯಿ ತಲುಪಿತ್ತು. 
 
ಏತನ್ಮಧ್ಯೆ ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸಂವೇದಿ ಸೂಚ್ಯಂಕ 209.74 ಪಾಯಿಂಟ್‌ಗಳಷ್ಟು ಕುಸಿತ ಕಂಡು 25,396.88 ಅಂಕಗಳಿಗೆ ತಲುಪಿದೆ.

ವೆಬ್ದುನಿಯಾವನ್ನು ಓದಿ