ಆರ್‌ಬಿಐ ಶೇ.2 ರಷ್ಟು ರೆಪೋ ದರ ಕಡಿತಗೊಳಿಸಲಿ ಎಂದ ಸಚಿವೆ ನಿರ್ಮಲಾ ಸೀತಾರಾಮನ್

ಸೋಮವಾರ, 29 ಆಗಸ್ಟ್ 2016 (18:04 IST)
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಉರ್ಜಿತ್ ಪಟೇಲ್ ಅಧಿಕಾರ ಸ್ವೀಕರಿಸುವ ಮುನ್ನವೇ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ನೆರವಾಗುವು ಉದ್ದೇಶದಿಂದ ಕನಿಷ್ಠ 200 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸುವಂತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಮನವಿ ಮಾಡಿದ್ದಾರೆ. 
 
100 ಬೇಸಿಸ್ ಪಾಯಿಂಟ್‌ 1 ಪ್ರತಿಶತ ಬಡ್ಡಿದರಕ್ಕೆ ಸಮನಾಗಿದ್ದು, ಜಾಗತಿಕವಾಗಿ ಬಡ್ಡಿದರ ಕಡಿಮೆ ಇರುವ ಹಿನ್ನೆಲೆಯಲ್ಲಿ ಹೊಸ ಉದ್ಯೋಗಗಳ ಸೃಷ್ಟಿ ಹಾಗೂ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಸಹಾಯ ಮಾಡುವ ಉದ್ದೇಶದಿಂದ 2 ಪ್ರತಿಶತ ಬಡ್ಡಿದರವನ್ನು ಕಡಿತಗೊಳಿಸುವುದು ಸೂಕ್ತ ಎಂದು ಟ್ವೀಟ್ ಮಾಡಿದ್ದಾರೆ. 
 
ಬ್ಯಾಂಕ್‌ಗಳು ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ಅಲ್ಪ ಪ್ರಮಾಣದಲ್ಲಿ ಹಣವನ್ನು ಸಾಲವಾಗಿ ಪಡೆದು ರೆಪೋ ದರವನ್ನು ಬಡ್ಡಿಯಂತೆ ಪಾವತಿಸುತ್ತಿದೆ. ಹೆಚ್ಚಿನ ಪ್ರಮಾಣದ ಹಣವನ್ನು ಸ್ಥಿರ ಠೇವಣಿಗಳ ಮೇಲೆ ಸಾಲವಾಗಿ ಪಡೆಯುವುದರಿಂದ  ದೊಡ್ಡ ಮಟ್ಟದಲ್ಲಿ ಬಡ್ಡಿ ದರ ಕಡಿತಗೊಳಿಸುವುದರಿಂದ ಬ್ಯಾಂಕ್‌ಗಳ ಸ್ಥಿರ ಠೇವಣಿಗಳ ಮೇಲೆ ನಕಾರಾತ್ಮಕ ಪ್ರಭಾವ ಬೀರಲಿದೆ ಎಂದು ಸಾಕಷ್ಟು ಟೀಕೆಗಳು ವ್ಯಕ್ತವಾಗಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ