ಮೇ 14 ರಂದು ರಾಜ್ಯದಲ್ಲಿ ಪೆಟ್ರೋಲ್ ಬಂಕ್ ಬಂದ್

ಗುರುವಾರ, 4 ಮೇ 2017 (15:13 IST)
ಕೇಂದ್ರ ಸರಕಾರ ಪೆಟ್ರೋಲ್ ಬಂಕ್ ಮಾಲೀಕರ ಬೇಡಿಕೆ ಈಡೇರಿಸುವಲ್ಲಿ ಮೀನಾಮೇಷ ಎಣಿಸುತ್ತಿರುವುದರಿಂದ ಮೇ 14 ರಂದು ರಾಜ್ಯದ ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಲಾಗುವುದು ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಅಧ್ಯಕ್ಷ ಡಿ.ಆರ್,ರವೀಂದ್ರ ಹೇಳಿದ್ದಾರೆ.
 
ಪೆಟ್ರೋಲ್ ಬಂಕ್ ಮಾಲೀಕರ ಕಮಿಷನ್ ಸೇರಿದಂತೆ ಇತರ ಬೇಡಿಕೆಗಳನ್ನು ಸರಕಾರ ಈಡೇರಿಸುತ್ತಿಲ್ಲ. ಕೇವಲ ಭರವಸೆಗಳನ್ನು ನೀಡುತ್ತಿದೆ. ಇದನ್ನು ವಿರೋಧಿಸಿ ಮೇ 10 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಯನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
 
ಪೆಟ್ರೋಲ್ ಬಂಕ್‌ಗಳ ಖರ್ಚು ವೆಚ್ಚುಗಳಿಗೆ ಹೋಲಿಸಿ ಕೇಂದ್ರ ಸರಕಾರ ಕಮಿಷನ್ ನೀಡಿದಲ್ಲಿ ಮಾತ್ರ ಪ್ರತಿಭಟನೆಯನ್ನು ಹಿಂಪಡೆಯಲಾಗುವುದು ಎಂದರು.
 
ಒಂದು ವೇಳೆ, ಮೇ 14 ರ ಪ್ರತಿಭಟನೆಯ ನಂತರವೂ ಕೇಂದ್ರ ಸರಕಾರ ಮಣಿಯದಿದ್ದಲ್ಲಿ ಮುಂಬರುವ ದಿನಗಳಲ್ಲಿ ತೀವ್ರವಾದ ಪ್ರತಿಭಟನೆ ನಡೆಸುತ್ತೇವೆ ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಅಧ್ಯಕ್ಷ ಡಿ.ಆರ್,ರವೀಂದ್ರ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ