ಬಿಪಿಎಲ್ ಕಾರ್ಡುದಾರರಿಗೆ ಹಣ ಬೇಡ, ಧಾನ್ಯ ವಿತರಿಸಲು ಆದೇಶ

ಗುರುವಾರ, 2 ಫೆಬ್ರವರಿ 2017 (12:45 IST)
ಮುಂದಿನ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲೇ ಶಾಲಾ ವಿದ್ಯಾರ್ಥಿಗಳ‌ ಪಠ್ಯ ಪುಸ್ತಕ, ಸಮವಸ್ತ್ರ, ಶೂ ಮತ್ತು ಸೈಕಲ್ ಸಿದ್ಧವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಎರಡು ದಿನಗಳ ಡಿಸಿ ಮತ್ತು ಜಿಲ್ಲಾ ಪಂಚಾಯ್ತಿ ಸಿಇಓ ಗಳ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.
 
ತಾಯಂದಿರ ಮರಣ ಪ್ರಮಾಣ ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಾಗಿದೆ. ಇದಕ್ಕೆ ಕಾರಣ ಏನು? ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಎಂದು ಹೇಳಿದ ಮುಖ್ಯಮಂತ್ರಿಗಳು1995ರ ನೀತಿ ಪ್ರಕಾರ ಅಡುಗೆ ಅನಿಲ ಸಂಪರ್ಕ ಇದ್ದವರಿಗೆ ಸೀಮೆಎಣ್ಣೆ ವಿತರಿಸುತ್ತಿಲ್ಲ. ಅಡುಗೆ ಅನಿಲ ಸಂಪರ್ಕ ಇದ್ದವರಿಗೂ ಸೀಮೆಎಣ್ಣೆ ವಿತರಿಸೋಣ ಈ ಕುರಿತು ಪ್ರಸ್ತಾವನೆ ಸಲ್ಲಿಸಿ ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
 
ಹಣ ಬೇಡ, ಧಾನ್ಯ ಕೊಡಿ: ಬಿಪಿಎಲ್ ಕಾರ್ಡ್ ದಾರರಿಗೆ ಪಡಿತರ ಧಾನ್ಯವನ್ನೇ ವಿತರಿಸಿ. ಕೂಪನ್ ವ್ಯವಸ್ಥೆ ಅಥವಾ ಹಣ ನೀಡುವ ಪದ್ಧತಿ ಬೇಡ. ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಎಂಬ ಕಾರಣಕ್ಕೆ ಫಲಾನುಭವಿಗಳಿಗೆ ಪಡಿತರ ಧಾನ್ಯ ವಿತರಣೆ ನಿಲ್ಲಿಸುವುದು ಸರಿಯಲ್ಲ. ಈ ರೀತಿ ಮಾಡಿದರೆ ಬರಗಾಲದಲ್ಲಿ ಜನ ಏನು ತಿನ್ನಬೇಕು. ತಾಂತ್ರಿಕ ತೊಂದರೆ ಆಗಿರುವುದು ಅಧಿಕಾರಿಗಳಿಂದ. ಇದಕ್ಕಾಗಿ ಫಲಾನುಭವಿಗಳಿಗೇಕೆ ತೊಂದರೆ ಕೊಡಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.ಹಸಿವು ಮುಕ್ತ ಕರ್ನಾಟಕ ಮಾಡಬೇಕು ಎಂಬುದು ನಮ್ಮ ಗುರಿ. ಫಲಾನುಭವಿಗಳಿಗೆ ಪ್ರತಿ ತಿಂಗಳೂ ತಪ್ಪದೇ ಪಡಿತರ ಧಾನ್ಯ ವಿತರಿಸಬೇಕು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ