ದೀಪಾವಳಿ ಹಬ್ಬದಂದು ಮತ್ತೆ ಇಳಿದ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ

ಗುರುವಾರ, 8 ನವೆಂಬರ್ 2018 (15:02 IST)
ನವದೆಹಲಿ : ಕಳೆದ ದಿನಗಳಿಂದ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿದ್ದು, ಇದೀಗ ದೀಪಾವಳಿ ಹಬ್ಬದಂದು ಕೂಡ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.


ಇನ್ನು ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆಯಲ್ಲಿ 0.21 ಪೈಸೆ ಕಡಿಮೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಈಗ 78.21 ರೂ.ಗಳಾಗಿವೆ. ಹಾಗೇ  ಡೀಸೆಲ್ ಬೆಲೆಯಲ್ಲೂ ಕೂಡ 0.18ಪೈಸೆ ಕಡಿಮೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ 72.89 ರೂಗಳಾಗಿದೆ.


ಇನ್ನು ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 83.72 ರೂಪಾಯಿ ತಲುಪಿದೆ. ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 0.20 ಪೈಸೆ ಕಡಿಮೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ 76.57 ರೂಪಾಯಿಗಳಿಗೆ ಮಾರಾಟವಾಗುತ್ತಿದ್ದು, 0.19 ಪೈಸೆಯಷ್ಟು ಕಡಿಮೆಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ