ಪೆಟ್ರೋಲ್, ಡೀಸೆಲ್ ದರ ಏರಿಕೆ: ಉಗ್ರ ಪ್ರತಿಭಟನೆ

ಗುರುವಾರ, 24 ಮೇ 2018 (19:44 IST)
ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಹಾಗೂ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ. 
ನಗರದ ಗಾಂಧಿ ಸರ್ಕಲ್ ಬಳಿ ಪ್ರತಿಭಟನೆ ಮಾಡಿದ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ರು..ರಾಜ್ಯ‌ ವಿಧಾನಸಭಾ ಚುನಾವಣೆ ಮುಗಿಯೋವರೆಗೂ ಸುಮ್ಮನಿದ್ದು ಈಗ ಬೆಲೆ ಏರಿಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
 ಚುನಾವಣಾ ಪೂರ್ವದಲ್ಲಿ  ತೈಲ ಬೆಲೆ ಏರಿಕೆ ಮಾಡಬಹುದಿತ್ತು ಆದ್ರೆ ಮಾಡಿಲ್ಲ.. ಪದೇ ಪದೆ ತೈಲ ಬೆಲೆ ಏರಿಕೆಯಿಂದ ನಿತ್ಯ ಬಳಕೆ ವಸ್ತುಗಳ ಬೆಲೆಯೂ ಏರಿಕೆ ಆಗುತ್ತಿದೆ. ಕೇಂದ್ರ ಸರ್ಕಾರ ಬಡವರ, ಮಧ್ಯಮವರ್ಗದವರ ಮೇಲೆ ಗದಾಪ್ರಹಾರ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ರು.. 
 
ಇನ್ನು ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು ಹಾಗೂ ಈಗಿರುವ ಬೆಲೆ ಕಡಿಮೆ ಮಾಡಬೇಕು ಇಲ್ಲದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ