ನವದೆಹಲಿ : ದೇಶದಲ್ಲಿ 2030 ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಉತ್ಪಾದನೆ, ಮಾರಾಟ ಬಂದ್ ಆಗಲಿರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ.
ಹೌದು. 2030 ರಿಂದ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡುವಂತಹ ನಿರ್ಧಾರವನ್ನು ಕೈಗೊಂಡಿದೆ. ಈ ಹಿನ್ನಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಪ್ರೋತ್ಸಾಹಿಸಲು ಈಗಾಗಲೇ ಕೇಂದ್ರ ಸರ್ಕಾರ ನೋಂದಣಿ ಶುಲ್ಕವನ್ನು ರದ್ದುಪಡಿಸಿದ್ದು ಮಾತ್ರವಲ್ಲ ಅದರ ಮೇಲಿನ ಜಿ.ಎಸ್.ಟಿ. ದರ ಇಳಿಕೆ ಮಾಡಲು ಮುಂದಾಗಿದೆ.
ಹಾಗೇ 150 ಸಿಸಿ ಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳ ಮಾರಾಟಕ್ಕೆ 2025 ಡೆಡ್ ಲೈನ್ ಆಗಿದೆ. 2025 ರ ನಂತರ ಎಲೆಕ್ಟ್ರಿಕ್ ದ್ವಿಚಕ್ರವಾಹನಗಳು ಕಡ್ಡಾಯವಾಗಲಿವೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ಕಂಪನಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಈ ನಿಟ್ಟಿನಲ್ಲಿ ನೀತಿ ಆಯೋಗ ಯೋಜನೆ ಸಿದ್ಧಪಡಿಸುತ್ತಿದ್ದು, ಅದರ ಅನುಷ್ಠಾನಕ್ಕೆ ಕಠಿಣ ಕ್ರಮ ಕೈಗೊಳ್ಳತೊಡಗಿದೆ ಎನ್ನಲಾಗಿದೆ.