ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಶಾಕ್: ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ

Krishnaveni K

ಶನಿವಾರ, 15 ಜೂನ್ 2024 (16:19 IST)
ಬೆಂಗಳೂರು: ಲೋಕಸಭೆ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಜನರಿಗೆ ಶಾಕ್ ಸಿಕ್ಕಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ  ಚಿಲ್ಲರೆ ಮಾರಾಟ ತೆರಿಗೆ ದರವನ್ನು ರಾಜ್ಯ ಸರ್ಕಾರರ ಹೆಚ್ಚಳ ಮಾಡಲು ತೀರ್ಮಾನಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 3 ರೂ. ರಿಂದ 5 ರೂ.ವರೆಗೆ ಹೆಚ್ಚಳವಾಗುವ ಸಾಧ್ಯತೆಯಿದೆ. ಇದು ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಕ್ಕೆ ಇದು ಗಾಯದ ಮೇಲೆ ಬರೆ ಎಳೆದಂತಾಗಲಿದೆ.

ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ.25.92 ರಷ್ಟಿತ್ತು. ಈಗ ಇದನ್ನು ಶೇ. 39 ರಷ್ಟು ಹೆಚ್ಚಳ ಮಾಡಲಾಗಿದೆ.  ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ ಮೊದಲು ಶೇ. 14.34 ರಷ್ಟಿತ್ತು. ಈಗ ಶೇ. 4.1 ರಷ್ಟು ಹೆಚ್ಚಳ ಮಾಡಲಾಗಿದೆ.  ಇದರಿಂದಾಗಿ ಪೆಟ್ರೋಲ್ ದರ 3 ರೂ.ವರೆಗೆ ಮತ್ತು ಡೀಸೆಲ್ ದರ 3.50 ರೂ.ವರೆಗೆ ಹೆಚ್ಚಳವಾಗಬಹುದಾಗಿದೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ದರ ರಾಷ್ಟ್ರಾದ್ಯಂತ ಕೊಂಚ ಮಟ್ಟಿಗೆ ಕಡಿಮೆಯಾಗಿತ್ತು. ಆದರೆ ಈಗ ರಾಜ್ಯ ಸರ್ಕಾರ ರೀಟೇಲ್ ಮಾರಾಟ ತೆರಿಗೆ ಹೆಚ್ಚಿಸಿರುವುದರಿಂದ ಇಂಧನ ಬೆಲೆಯಲ್ಲಿ ಏರಿಕೆಯಾಗುವುದು ಖಚಿತವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ