ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರದಲ್ಲಿ ಇಳಿಕೆ

ಗುರುವಾರ, 15 ಜೂನ್ 2017 (19:49 IST)
ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರದಲ್ಲಿ ಇಳಿಕೆಯಾಗಿದ್ದು ಪರಿಷ್ಕ್ರತ ದರ ಇಂದು ಮಧ್ಯ ರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಪೆಟ್ರೋಲೀಯಂ ಸಚಿವಾಲಯದ ಮೂಲಗಳು ತಿಳಿಸಿವೆ.
 
ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 1.24 ರೂಪಾಯಿಗಳಿಗೆ ಇಳಿಕೆಯಾಗಿದ್ದರೆ, ಡೀಸೆಲ್ ದರ ಪ್ರತಿ ಲೀಟರ್‌ಗೆ 1.12 ರೂಪಾಯಿ ಇಳಿಕೆಯಾಗಿದೆ.
 
ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿರುವುದು  ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಿಂದಾಗಿ, ಪೆಟ್ರೋಲ್, ಡೀಸೆಲ್ ದರದಲ್ಲಿ ಇಳಿಕೆಯಾಗಿದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. 
 
ಕಳೆದ ಜೂನ್ 1 ರಂದು ಮಧ್ಯ ರಾತ್ರಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 1.23 ರೂಪಾಯಿಗಳಷ್ಟು ಹೆಚ್ಚಳವಾಗಿತ್ತು. ಡೀಸೆಲ್ ದರ ಪ್ರತಿ ಲೀಟರ್‌ಗೆ 0.89 ಪೈಸೆ ಏರಿಕೆಯಾಗಿತ್ತು. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ