ಇತ್ತೀಚೆಗೆ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಗುಡುಗಿ ವಜಾಗೊಳಿಸುವಂತೆ ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದರು. ಆದಾಗ್ಯೂ, ಪ್ರಧಾನಿ ನರೇಂದ್ರ ಮೋದಿ ರಾಜನ್ ಅಧಿಕಾರದಲ್ಲಿ ಮುಂದುವರೆಯಲಿ ಎಂದು ಸೂಚಿಸಿದ್ದರು ಎಂದು ದೈನಂದಿನ ಪತ್ರಿಕೆ ವರದಿ ಮಾಡಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್‌ರನ್ನು ವಜಾಗೊಳಿಸಿದಲ್ಲಿ ವಿಶ್ವದಾದ್ಯಂತ ತಪ್ಪು ಸಂದೇಶ ಸಾರಿದಂತಾಗುತ್ತದೆ ಎಂದು ಪ್ರದಾನಿ ಮೋದಿ, ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿಯವರಿಗೆ ಮನವರಿಕೆ ಮಾಡಿಕೊಟ್ಟ ನಂತರ , ಜೇಟ್ಲಿ ರಘುರಾಮ್ ರಾಜನ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.