ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರ ಇಳಿಕೆ

ಶುಕ್ರವಾರ, 8 ಫೆಬ್ರವರಿ 2019 (07:03 IST)
ನವದೆಹಲಿ : 17 ತಿಂಗಳ ನಂತರ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಇಳಿಸಿದ್ದು, ಆ ಮೂಲಕ ರೆಪೋ ದರ 6.50 ರಿಂದ 6.25 ಕ್ಕೆ ಇಳಿಕೆಯಾಗಿದೆ.


ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ನಡೆದ ವಿತ್ತೀಯ ನೀತಿ ಸಮಿತಿಯು ತನ್ನ ಆರನೇ ದ್ವೆಮಾಸಿಕ ವಿತ್ತೀಯ ಸಭೆಯಲ್ಲಿ 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದೆ. ಪರಿಣಾಮವಾಗಿ, ರಿವರ್ಸ್ ರೆಪೋ ದರ ಶೇ. 6.25 ರಿಂದ ಶೇ. 6ಕ್ಕೆ ಇಳಿದಿದೆ.


ಆರ್ಬಿಐನ ರೆಪೋ ದರ ಇಳಿಕೆಯಾಗಿರುವುದರಿಂದ ಜನಸಾಮಾನ್ಯರ ಗೃಹ, ವಾಹನ ಮತ್ತು ವೈಯಕ್ತಿಕ ಸಾಲದ ಮೇಲಿನ ಬಡ್ಡಿದರದಲ್ಲೂ ಇಳಿಕೆ ಆಗಲಿದೆ. ಇದರಿಂದ ಸಾಲಗಾರರು ಪಾವತಿಸಬೇಕಾಗುವ ಇಎಂಐ ಇಳಿಕೆಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ