ಸಣ್ಣ ಕೈಗಾರಿಕೆಗೆ ಅಭಿವೃದ್ಧಿಗೆ ರೂ.8.73 ಕೋಟಿ

ಸೋಮವಾರ, 16 ಜನವರಿ 2017 (10:08 IST)
ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ವಿಶೇಷ ಆಸಕ್ತಿ ತೋರಿಸಿರುವ ಸರ್ಕಾರವು ಬೆಳಗಾವಿ ಜಿಲ್ಲೆಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ 8.73 ಕೋಟಿ ರೂಪಾಯಿ ಮಂಜೂರು ಮಾಡಿದೆ ಎಂದು ಸಚಿವ ದೇಶಪಾಂಡೆ ತಿಳಿಸಿದ್ದಾರೆ. 
 
 ಮೊದಲ ತಲೆಮಾರಿನ ಅಂದರೆ ಹೊಸದಾಗಿ ಕೈಗಾರಿಕೆ ಸ್ಥಾಪಿಸುವವರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಹಾಗೂ ಬೆಳಗಾವಿಯ ಖಾಯಂ ವಸ್ತುಪ್ರದರ್ಶನ ಸಂಕೀರ್ಣದಲ್ಲಿ ವರ್ಷದಲ್ಲಿ ಕನಿಷ್ಠ 6-8 ವಸ್ತುಪ್ರದರ್ಶನವನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
 
ಕೇಂದ್ರ ಸರ್ಕಾರವು ಬೆಳಗಾವಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಫ್ತು ಕೇಂದ್ರಕ್ಕೆ ಭೂಮಿ ಸೇರಿದಂತೆ ಎಲ್ಲ ರೀತಿಯ ಸಹಾಯ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ದೇಶಪಾಂಡೆ ಭರವಸೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ