ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಕುಸಿತ

ಸೋಮವಾರ, 29 ಆಗಸ್ಟ್ 2016 (17:59 IST)
ಮಾಸಾಂತ್ಯದ ವಹಿವಾಟಿನ ಪರಿಣಾಮವಾಗಿ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಹಾಗೂ ರಫ್ತು ವಹಿವಾಟುದಾರರು ಡಾಲರ್‌ಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಕುಸಿತ ಕಂಡು 67.18 ರೂಪಾಯಿಗೆ ತಲುಪಿದೆ.
 
ಅಮೆರಿಕಾದ ಫೆಡರಲ್ ರಿಸರ್ವ್ ಅಧ್ಯಕ್ಷ ಜಾನೆಟ್ ಯೆಲ್ಲೆನ್ ಮುಂಬರುವ ತಿಂಗಳಲ್ಲಿ ಬಡ್ಡಿದರ ಹೆಚ್ಚಳವಾಗುವ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಾಗತಿಕ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಹೆಚ್ಚಳವಾಗಿದೆ ಎಂದು ಹೇಳಲಾಗುತ್ತಿದೆ.
 
ಮಾಸಾಂತ್ಯದ ವಹಿವಾಟಿನ ಹಿನ್ನೆಲೆಯಲ್ಲಿ ರಫ್ತು ವಹಿವಾಟುದಾರರಿಂದ ಡಾಲರ್‌ಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿರುವುದು ಹಾಗೂ ದೇಶೀಯ ಷೇರು ಮಾರುಕಟ್ಟೆಯ ಕಡಿಮೆ ಆರಂಭಿಕ ವಹಿವಾಟು ರೂಪಾಯಿ ಮೌಲ್ಯದ ಮೇಲೆ ಪರಿಣಾಮ ಬೀರಿದೆ ಎಂದು ಮಾರುಕಟ್ಟೆ ವರ್ತಕರು ತಿಳಿಸಿದ್ದಾರೆ.
 
ಶುಕ್ರವಾರದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕನಿಷ್ಠ ಕುಸಿತ ಕಂಡು 67.06 ಪಾಯಿಂಟ್‌ಗಳ ಕುಸಿತ ಕಂಡಿದೆ 
 
ಏತನ್ಮಧ್ಯೆ ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸಂವೇದಿ ಸೂಚ್ಯಂಕ 60.39 ಪಾಯಿಂಟ್‌ಗಳಷ್ಟು ಕುಸಿತ ಕಂಡು 27,721.86 ಅಂಕಗಳಿಗೆ ತಲುಪಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ