ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆ!
ಮಂಗಳವಾರ, 28 ಜೂನ್ 2016 (11:39 IST)
ಮುಂಬೈ: ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 23 ಪೈಸೆ ಚೇತರಿಕೆ ಕಂಡು 67.72 ರೂಪಾಯಿಗೆ ತಲುಪಿದೆ.
ಸಾಗರೋತ್ತರ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳ ಹರಿವು ಹೆಚ್ಚಳವಾದ ಪರಿಣಾಮ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆ ವರ್ತಕರು ತಿಳಿಸಿದ್ದಾರೆ.
ಸೋಮವಾರದ ವಹಿವಾಟಿನ ಮುಕ್ತಾಯಕ್ಕೆ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 67.96 ಕ್ಕೆ ತಲುಪಿತ್ತು.
ಏತನ್ಮಧ್ಯೆ ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಬಿಎಸ್ಇ ಸಂವೇದಿ ಸೂಚ್ಯಂಕ 82.32 ಪಾಯಿಂಟ್ಗಳಷ್ಟು ಚೇತರಿಕೆ ಕಂಡು 26,485.28 ಅಂಕಗಳಿಗೆ ತಲುಪಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.