ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆ

ಮಂಗಳವಾರ, 30 ಆಗಸ್ಟ್ 2016 (13:06 IST)
ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಹಾಗೂ ರಫ್ತು ವಹಿವಾಟುದಾರರು ಡಾಲರ್ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 7 ಪೈಸೆ ಚೇತರಿಕೆ ಕಂಡು 67.11 ಕ್ಕೆ ತಲುಪಿದೆ.  
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಮತ್ತು ಸಾಗರೋತ್ತರ ಮಾರುಕಟ್ಟೆಗಳಲ್ಲಿ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದಲ್ಲಿ ಕುಸಿತವಾಗಿದ್ದರಿಂದ ರೂಪಾಯಿ ಮೌಲ್ಯದಲ್ಲಿ ಏರಿಕೆ ಕಂಡಿದೆ ಎಂದು ಮಾರುಕಟ್ಟೆ ವರ್ತಕರು ತಿಳಿಸಿದ್ದಾರೆ.
 
ಅಮೆರಿಕಾದ ಫೆಡರಲ್ ರಿಸರ್ವ್ ಅಧ್ಯಕ್ಷ ಜಾನೆಟ್ ಯೆಲ್ಲೆನ್ ಮುಂಬರುವ ತಿಂಗಳಲ್ಲಿ ಬಡ್ಡಿದರ ಹೆಚ್ಚಳವಾಗುವ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸೋಮವಾರದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 12 ಪೈಸೆ ಕುಸಿತ ಕಂಡು 67.18 ಕ್ಕೆ ತಲುಪಿತ್ತು. 
 
ಏತನ್ಮಧ್ಯೆ ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸಂವೇದಿ ಸೂಚ್ಯಂಕ 176.95 ಪಾಯಿಂಟ್‌ಗಳಷ್ಟು ಎರಿಕೆ ಕಂಡು 28,079.61 ಅಂಕಗಳಿಗೆ ತಲುಪಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ