ಶೇರುಪೇಟೆಗೆ ಶುಕ್ರದೆಸೆ: ಭರ್ಜರಿ 521 ಪಾಯಿಂಟ್‌ಗಳ ಏರಿಕೆ ಕಂಡ ಸೂಚ್ಯಂಕ

ಮಂಗಳವಾರ, 18 ಅಕ್ಟೋಬರ್ 2016 (19:28 IST)
ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಭರ್ಜರಿ 521 ಪಾಯಿಂಟ್‌ಗಳ ಏರಿಕೆ ಕಂಡಿದೆ. ಐದು ತಿಂಗಳುಗಳ ಅವಧಿಯಲ್ಲಿ ಮೊದಲ ಬಾರಿಗೆ ಸೂಚ್ಯಂಕ ಗರಿಷ್ಠ ಏರಿಕೆ ಕಂಡಿದೆ. 
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 520.91 ಪಾಯಿಂಟ್‌ಗಳ ಏರಿಕೆ ಕಂಡು 28,050.88 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 157.50 ಪಾಯಿಂಟ್‌ಗಳ ಏರಿಕೆ ಕಂಡು 8,677.90 ಅಂಕಗಳಿಗೆ ತಲುಪಿದೆ. 
 
ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.38 ರಷ್ಟು ಚೇತರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.55 ರಷ್ಟು ಏರಿಕೆಯಾಗಿದೆ. ಶಾಂಘೈ ಶೇರುಪೇಟೆ ಶೇ.1.40 ರಷ್ಟು ಚೇತರಿಕೆ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ