ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟ ವೀಕ್ಷಿಸಲು ಕ್ರಿಕೆಟ್ ಪ್ರಿಯರಿಗೆ ಜಿಯೋ ಕಡೆಯಿಂದ ಸ್ಪೆಷಲ್ ಆಫರ್

ಬುಧವಾರ, 19 ಜೂನ್ 2019 (08:54 IST)
ನವದೆಹಲಿ : ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟ ನಡೆಯುತ್ತಿರುವ ಹಿನ್ನಲೆಯಲ್ಲಿ ಕ್ರಿಕೆಟ್ ಪ್ರಿಯರಿಗಾಗಿ ಜಿಯೋ ವಿಶೇಷ ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ.




ಜಿಯೋ 449 ರೂಪಾಯಿ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದುಇದು 3 ತಿಂಗಳುಗಳ ವ್ಯಾಲಿಡಿಟಿಯನ್ನು ಹೊಂದಿದೆ. ಈ ಪ್ಲಾನ್ ನಲ್ಲಿ ಗ್ರಾಹಕರಿಗೆ ಪ್ರತಿ ದಿನ 1.5 ಜಿಬಿ ಡೇಟಾ ಸಿಗಲಿದೆ. ಹಾಗೇ ಅನಿಯಮಿತ ಕರೆ ಹಾಗೂ 100 ಎಸ್‌ಎಂಎಸ್ ಉಚಿತವಾಗಿ ಪಡೆಯಲಿದ್ದಾರೆ.


ಇದರ ಜೊತೆಗೆ ಗ್ರಾಹಕರಿಗೆ ಕ್ರಿಕೆಟ್ ಪಂದ್ಯಾಟಗಳನ್ನು ವೀಕ್ಷಿಸಲು ಜಿಯೋ ಕ್ರಿಕೆಟ್ ಸೀಸನ್ ಡೇಟಾ ಪ್ಲಾನ್ ಬಿಡುಗಡೆ ಮಾಡಿದ್ದು, ಈ ಪ್ಲಾನ್ ನಲ್ಲಿ  251ರೂ, ರಿಚಾರ್ಜ್ ಮಾಡಿದರೆ ಪ್ರತಿದಿನ 2 ಜಿಬಿ ಡೇಟಾ ಸಿಗಲಿದ್ದು, ಇದು 51 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಹಾಗೇ ICC Cricket World Cup 2019 ವಿಶ್ವಕಪ್ ನ ಎಲ್ಲಾ ಪಂದ್ಯಗಳನ್ನು ಲೈವ್ ಸ್ಟ್ರೀಮಿಂಗ್ ನೋಡಬಹುದಾಗಿದೆ.


ಇನ್ನೊಂದು ರೂ. 198 ಪ್ಲಾನ್ ನಲ್ಲಿ ಪ್ರತಿದಿನ 2 ಜಿಬಿ ಡೇಟಾ ಸಿಗಲಿದ್ದು, ಇದು 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಹಾಗೇ ಇದರಲ್ಲಿ ಅನಿಯಮಿತ ಕರೆ ಹಾಗೂ 100 ಎಸ್‌ಎಂಎಸ್ ಉಚಿತವಾಗಿ ಸಿಗಲಿದೆ. ಈ ಅಪ್ಲಿಕೇಶನ್ ಅಡಿಯಲ್ಲಿ ಬಳಕೆದಾರರು ಎಲ್ಲಾ ಜಿಯೋ ಅಪ್ಲಿಕೇಶನ್ ಗಳ ಪೂರಕ ಚಂದಾದಾರಿಕೆಯನ್ನು ಪಡೆ ಯುತ್ತಾರೆ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ