ತೆರಿಗೆ ಸುಧಾರಣೆಯಲ್ಲಿ ಗಣನೀಯ ಸುಧಾರಣೆ -CM

ಸೋಮವಾರ, 20 ಫೆಬ್ರವರಿ 2023 (16:23 IST)
ಬಜೆಟ್​ ಅಧಿವೇಶನ ಪ್ರಾರಂಭವಾಗಿದ್ದು, ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ನೀಡಿದ್ದು, ರಾಜ್ಯಪಾಲರ ಭಾಷಣದಲ್ಲಿ ರಾಜಕೀಯ ಇಲ್ಲ, ಸತ್ಯವನ್ನೇ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ಹೇಗೆ ರಚನೆಯಾಯ್ತು ಎಂದು ಎಲ್ಲರಿಗೂ ಗೊತ್ತಿದೆ. ಸವಾಲಿನ ಸಂದರ್ಭದಲ್ಲಿ ನಾನು ಸಿಎಂ ಆಗಿದ್ದೇನೆ. ನಾವು ಆತ್ಮಸ್ಥೈರ್ಯದಿಂದ ಕೆಲಸ ಮಾಡಿದ್ದೇವೆ. ನಾವು ಒಂದು ದಿನವೂ ಸರಕಾರಿ ನೌಕರರಿಗೆ ಸಂಬಳ ನಿಲ್ಲಿಸಲಿಲ್ಲ. ತೆರಿಗೆ ಸುಧಾರಣೆಯಲ್ಲಿ ಗಣನೀಯ ಸುಧಾರಣೆ ಆಗಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ