ವಲಸೆ ಕಾರ್ಮಿಕರಿಗಾಗಿ ರೇಷನ್ ವಿತರಣೆಯಲ್ಲಿ ಹೊಸ ಯೋಜನೆಯನ್ನು ಜಾರಿಗೆ ತಂದ ಕೇಂದ್ರ ಸರ್ಕಾರ
ಶನಿವಾರ, 29 ಜೂನ್ 2019 (08:55 IST)
ನವದೆಹಲಿ : ವಲಸೆ ಕಾರ್ಮಿಕ ಕುಟುಂಬಕ್ಕೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ರೇಷನ್ ವಿತರಣಾ ವ್ಯವಸ್ಥೆಯಲ್ಲಿ ಹೊಸ ಯೋಜನೆಯನ್ನು ಜಾರಿಗೆ ತರಲಿದೆ.
ಕೆಲವು ಕಾರ್ಮಿಕರು ಕೆಲಸದ ನಿಮಿತ್ತ ದೇಶಾದ್ಯಂತ ವಲಸೆ ಹೋಗುತ್ತಾರೆ. ಈ ಹಿನ್ನಲೆಯಲ್ಲಿ ಅವರಿಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಡೆಯಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಯನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ.
ಬಡ ಜನರು, ಕಾರ್ಮಿಕರು ಉದ್ಯೋಗ ಅಥವಾ ಇನ್ಯಾವುದೇ ಕಾರಣಕ್ಕೆ ದೇಶದ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋದಾಗ ಅವರಿಗೆ ಆಹಾರ ಧಾನ್ಯ ಪಡೆಯಲು ಸಾಧ್ಯವಾಗುವಂತೆ 'ಒನ್ ನೇಷನ್, ಒನ್ ರೇಷನ್ ಕಾರ್ಡ್' ರೂಪಿಸಲಾಗುತ್ತಿದೆ. ಇದರಿಂದ ಅವರು ನಿರ್ದಿಷ್ಟ ಪಡಿತರ ಅಂಗಡಿಯಿಂದ ಆಹಾರ ಧಾನ್ಯಗಳನ್ನು ಖರೀದಿಸಬೇಕಾಗಿಲ್ಲ. ತಮಗೆ ಹತ್ತಿರವಿರುವ ಯಾವುದೇ ಪಡಿತರ ಅಂಗಡಿಯಿಂದಲೂ ಆಹಾರಧಾನ್ಯ ಖರೀದಿಸಬಹುದಾಗಿದೆ.
ಅಲ್ಲದೇ ಈ ಯೋಜನೆಯಿಂದ ಒಂದೇ ಕುಟುಂಬದವರು ಒಂದಕ್ಕಿಂತ ಹೆಚ್ಚು ಕಾರ್ಡ್ ಗಳನ್ನು ಪಡೆಯುವುದನ್ನು ತಪ್ಪಿಸಬಹುದು. ಇದರಿಂದ ದೇಶದ ಬೊಕ್ಕಸಕ್ಕೂ ಉಳಿತಾಯವಾಗುತ್ತದೆ.