ನವದೆಹಲಿ : ಸಬ್ಸಿಡಿ ರಹಿತ ಸಿಲಿಂಡರ್ ಗಳ ದರ ಏರಿಕೆ ಮಾಡಲಾಗಿದ್ದು, ಈ ಮೂಲಕ ಗ್ರಾಹಕರಿಗೆ ಕೆಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ದರಗಳು ಕುಸಿದಿದ್ದು, ಭಾನುವಾರ ದರ ಪರಿಷ್ಕರಣೆಯನ್ನು ಮಾಡಲಾಗಿದೆ. ಆದ್ದರಿಂದ, ಸಬ್ಸಿಡಿರಹಿತ ಸಿಲಿಂಡರ್ ಗೆ ರೂ.15.5 ಏರಿಕೆ ಮಾಡಲಾಗಿದೆ.
ಈ ಹಿಂದೆ 14.5 ಕೆ.ಜಿ. ಸಿಲಿಂಡರ್ ಬೆಲೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 574.50 ರೂಪಾಯಿಗಳಿದ್ದು, ಈಗ 590 ರೂಪಾಯಿ ತಲುಪಿದೆ. ಮುಂಬೈನಲ್ಲಿ ಈಗ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 562 ರೂಪಾಯಿಗಳಾಗಿದ್ದರೆ, ಕೋಲ್ಕತ್ತಾದಲ್ಲಿ 616.50 ರೂಪಾಯಿಗಳಾಗಿದೆ. ಅದೇ ರೀತಿ ಚೆನ್ನೈನಲ್ಲಿ 606.50 ರೂಪಾಯಿಗಳಾಗಿದೆ.