ಮೂರು ಬ್ಯಾಂಕುಗಳ ವಿಲೀನಕ್ಕೆ ಒಪ್ಪಿಗೆ ನೀಡಿದ ಕೇಂದ್ರ ಸಚಿವ ಸಂಪುಟ

ಗುರುವಾರ, 3 ಜನವರಿ 2019 (07:00 IST)
ನವದೆಹಲಿ : ಬ್ಯಾಂಕ್ ಗಳ ವಿಲೀನಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ಮೂಲಕ ಇದೀಗ ವಿಜಯ ಬ್ಯಾಂಕ್‌, ದೇನಾ ಬ್ಯಾಂಕ್‌ ಮತ್ತು ಬ್ಯಾಂಕ್‌ ಆಫ್‌ ಬರೋಡಾ ವಿಲೀನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.


ವಿಜಯ ಬ್ಯಾಂಕ್ ಹಾಗೂ ದೇನಾ ಬ್ಯಾಂಕ್ ಗಳನ್ನು ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನಗೊಳಿಸಲು ಕೇಂದ್ರ ಹಣಕಾಸು ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್‌, ‘ವಿಲೀನದ ನಂತರ ವಿಜಯ ಬ್ಯಾಂಕ್‌ ಮತ್ತು ದೇನಾ ಬ್ಯಾಂಕ್‌ ನೌಕರರು ಬ್ಯಾಂಕ್‌ ಆಫ್‌ ಬರೋಡಾಗೆ ವರ್ಗಾವಣೆಯಾಗಲಿದ್ದಾರೆ ‘ಎಂದು ಹೇಳಿದ್ದಾರೆ.


ಅಲ್ಲದೇ ‘ಈ ವಿಲೀನ ಪ್ರಕ್ರಿಯೆಯಲ್ಲಿ ಯಾವುದೇ ಮರು ಹಂಚಿಕೆ ನಡೆಯುವುದಿಲ್ಲ. ಏಪ್ರಿಲ್ 1 ರಿಂದ ಇದು ಕಾರ್ಯರೂಪಕ್ಕೆ ಬರಲಿದೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ