ನಟಿ ಖುಷ್ಬೂ ಬಿಜೆಪಿಗೆ ಸೇರಿದ್ಯಾಕೆ?

ಸೋಮವಾರ, 12 ಅಕ್ಟೋಬರ್ 2020 (16:43 IST)
ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಪ್ರಧಾನ  ಕಾರ್ಯದರ್ಶಿ ಸಿ.ಟಿ.ರವಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್.ಮುರುಗನ್ ಮತ್ತು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಸೇರಿದಂತೆ ಪ್ರಮುಖ ಮುಖಂಡರು ಸಾಕ್ಷಿಯಾದರು.

ಬಿಜೆಪಿ ನೀಡುವ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಣೆ ಮಾಡುವುದಾಗಿ ನಟಿ ಖುಷ್ಬೂ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ