ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತ್ಯಕ್ರಿಯೆ ನಡೆದಿರುವ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತಮುತ್ತ 11 ದಿನ 144 ಸೆಕ್ಷನ್ ಜಾರಿ ಮಾಡಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಭದ್ರತೆಗಾಗಿ 400ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಗುಂಪು ಸೇರದಂತೆ ಜನರನ್ನು ಪೊಲೀಸರು ಕಳುಹಿಸುತ್ತಿದ್ದು, ಬೆಂಗಳೂರಿನ ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.