ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಎಲ್ಲಾ ಚಿತ್ರರಂಗದ ಕಲಾವಿದರೂ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಿನಿಮಾದ ವಿವಿಧ ವಿಭಾಗಗಳಲ್ಲದೆ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಸಿನಿ ಪ್ರಶಸ್ತಿಗಳನ್ನು ರಾಷ್ಟ್ರಪತಿಗಳು ವಿಜೇತರಿಗೆ ನೀಡಿ ಗೌರವಿಸಲಿದ್ದಾರೆ.
ಕಾಂತಾರ ಸಿನಿಮಾದಲ್ಲಿ ನಟನೆಗಾಗಿ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದುಕೊಂಡಿದ್ದರು. ನಾಯಕ ನಟ ಪ್ರಶಸ್ತಿ ಕನ್ನಡಕ್ಕೆ ಎಷ್ಟೋ ವರ್ಷಗಳ ನಂತರ ಸಿಗುತ್ತಿರುವುದು ವಿಶೇಷ. ಇದಲ್ಲದೆ ಕನ್ನಡದ ಇನ್ನೊಂದು ಹೆಮ್ಮೆಯ ಸಿನಿಮಾ ಕೆಜಿಎಫ್ 2 ಕೂಡಾ ಉತ್ತಮ ಸಾಹಸ, ಸಿನಿಮಾ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ.