ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

Sampriya

ಸೋಮವಾರ, 30 ಜೂನ್ 2025 (16:55 IST)
ಕಿರುತೆರೆಯ ಅತ್ಯಂತ ದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ ಕಿಚ್ಚ ಸುದೀಪ್‌ ಸಾರಥ್ಯದಲ್ಲಿ ಇದುವರೆಗೆ 11 ಸೀಸನ್‌ಗಳನ್ನು ಪೊರೈಸಿದೆ. 

ಆದರೆ ಸೀಸನ್ 11 ನಡೆಯುತ್ತಿರುವ ವೇಳೆಯೇ ಮುಂದಿನ ಸೀಸನ್‌ ನಡೆಸಿಕೊಡುವುದಿಲ್ಲ ಎಂದು ಕಿಚ್ಚ ಸುದೀಪ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಇದು ಬಿಗ್‌ಬಾಸ್ ಪ್ರಿಯರಿಗೆ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭಾರೀ ನಿರಾಸೆಯನ್ನು ಮೂಡಿಸಿತು. ಇದೀಗ ಬಿಗ್‌ಬಾಸ್ ತಂಡದ ಕಡೆಯಿಂದ ಹಾಗೂ ಕಿಚ್ಚ ಸುದೀಪ್ ಅವರಿಂದ ಬಿಗ್ ಅಪ್‌ಡೇಟ್ ಸಿಕ್ಕಿದೆ.

ಹೌದು, ಕಿಚ್ಚ ಸುದೀಪ್ ಅವರೇ 12ನೇ ಸೀಸನ್‌ಗೂ ನಿರೂಪಣೆ ಮಾಡುವುದಾಗಿ ಸ್ಪಷ್ಟನೆ ಸಿಕ್ಕಿದೆ. ಬಿಗ್‌ಬಾಸ್ ಸಂಯೋಜಕರು ಹಾಗೂ ಕಲರ್ಸ್‌ ತಂಡ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಈ ನಿರ್ಧಾರವನ್ನು ಪ್ರಕಟಿಸಿದೆ.

11ನೇ ಸೀಸನ್‌ ಸಂದರ್ಭದಲ್ಲಿ ನಿರೂಪಕ ಕಿಚ್ಚ ಸುದೀಪ್ ವಿದಾಯ ಹೇಳಿದ್ದರು. ಇದಾದ ಬಳಿಕ ಸಾಕಷ್ಟು ಚರ್ಚೆಗಳು ಶುರುವಾಗಿದ್ವು, ಈ ಬಗ್ಗೆ ಕಿಚ್ಚ ಸುದೀಪ್ ಕೂಡಾ ಕಾದು ನೋಡಿ ಅನ್ನೋ ಅಭಿಪ್ರಾಯ ಹಂಚಿಕೊಂಡಿದ್ರು. ಇದೀಗ ಮತ್ತೆ 12ನೇ ಸೀಸನ್ ನಡೆಸಿಕೊಡುವ ಬಗ್ಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ ಕಿಚ್ಚ.

ಸಾಮಾಜಿಕ ಜಾಲತಾಣದಲ್ಲಿ ಕಿಚ್ಚ ಸುದೀಪ್  ವಿದಾಯ ಹೇಳಿರುವುದು ಅವರ ಅಭಿಮಾನಿಗಳಿಗೆ ಶಾಕ್ ನೀಡಿತ್ತು. ಅದಲ್ಲದೆ ಸುದೀಪ್ ಇಲ್ಲದೆ ಬಿಗ್‌ಬಾಸ್ ಅನ್ನು ಕಲ್ಪಿಸಿಕೊಳ್ಳುವುದು ಕಷ್ಟ ಎಂಬ ಕೂಗು ವ್ಯಕ್ತವಾಗಿತ್ತು.  ಹೀಗಾಗಿ ಕಿಚ್ಚ ಸುದೀಪ್ ಈ ಬಾರಿಯ ಬಿಗ್‌ಬಾಸ್ ಕಾರ್ಯಕ್ರಮವನ್ನ ಮುಂದುವರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ