ಕಾವೇರಿ ಹೋರಾಟದಲ್ಲಿ ಭಾಗಿಯಾಗಲಿರುವ ನಟ ಅಭಿಷೇಕ್ ಅಂಬರೀಶ್
ಇದೀಗ ನಟ ಅಭಿಷೇಕ್ ಅಂಬರೀಶ್ ನೇರವಾಗಿ ಹೋರಾಟಕ್ಕೆ ಧುಮುಕಲಿದ್ದಾರೆ. ಇಂದು ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಕಾವೇರಿ ಹೋರಾಟದಲ್ಲಿ ಅಭಿಷೇಕ್ ಭಾಗಿಯಾಗಲಿದ್ದಾರೆ.
ಈಗಾಗಲೇ ಸಂಸದೆ ಸುಮಲತಾ ಅಂಬರೀಶ್ ಕೂಡಾ ಕಾವೇರಿ ವಿಚಾರವಾಗಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೀಗ ಅಭಿಷೇಕ್ ನೇರವಾಗಿ ಹೋರಾಟಕ್ಕಿಳಿಯುವ ಮೂಲಕ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.