ಬೆಂಗಳೂರು: ಜ್ಯೂನಿಯರ್ ರೆಬಲ್ ಸ್ಟಾರ್ ಅಂಬರೀಶ್ ನಾಯಕರಾಗಿರುವ ದುನಿಯಾ ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಸಿನಿಮಾಗೆ ಮುಹೂರ್ತ ಕಾರ್ಯಕ್ರಮ ನೆರವೇರಿದೆ.
ನಿನ್ನೆ ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮುಹೂರ್ತ ಪೂಜೆ ನಡೆದಿದೆ. ಈ ವೇಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಸೇರಿದಂತೆ ಇಡೀ ಚಿತ್ರತಂಡವೇ ಪಾಲ್ಗೊಂಡಿತ್ತು. ಕೆಎಂ ಸುಧೀರ್ ಈ ಚಿತ್ರದ ನಿರ್ಮಾಪಕರು. ಕೊರೋನಾ ಮತ್ತು ಲಾಕ್ ಡೌನ್ ಕಾರಣದಿಂದಾಗಿ ತಡವಾಗಿ ಚಿತ್ರಕ್ಕೆ ಚಾಲನೆ ಸಿಕ್ಕಿದೆ.