Actor Anantnag: ಕನ್ನಡದ ಹಿರಿಯ ನಟನಿಗೆ ಪ್ರಧಾನಿ ಮೋದಿ ಎಷ್ಟು ಗೌರವ ಕೊಡ್ತಾರೆ

Sampriya

ಮಂಗಳವಾರ, 3 ಜೂನ್ 2025 (14:31 IST)
Photo Credit X
ನವದೆಹಲಿ: ಈಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮವಿಭೂಷಣ ಪ್ರಶಸ್ತಿ ಪಡೆದಿದ್ದ ಕನ್ನಡದ ಹಿರಿಯ ನಟ ಅಂನತ್‌ನಾಗ್ ಅವರನ್ನು ಪ್ರಧಾನಿ ಮೋದಿ ಅವರು ಮಾತುಕತೆ ನಡೆಸಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪದ್ಮಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ನೀಡಿದ ಹೈ ಟೀ ಸಮಾರಂಭದಲ್ಲಿ ವೇಳೆ ಪ್ರಧಾನಿಯವರು ಅನಂತ್‌ನಾಗ್ ಜತೆ ಮಾತುಕತೆ ನಡೆಸಿದ್ದಾರೆ. 

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 27 ರಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಹಿರಿಯ ನಟ ಅನಂತ್‌ ನಾಗ್‌‌, ರಿಕಿ ಕೇಜ್‌, ಪ್ರಶಾಂತ್‌ ಪ್ರಕಾಶ್‌, ವೆಂಕಪ್ಪ ಅಂಬಾಜಿ ಸುಗಟೇಕರ್‌ ಸೇರಿದಂತೆ ದೇಶಾದ್ಯಂತ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ ಮಾಡಿದ್ದರು.

ಈ ಸಮಾರಂಭದ ಬಳಿಕ ರಾಷ್ಟ್ರಪತಿಯವರು ಹೈ ಟೀ ಸಮಾರಂಭ ಆಯೋಜನೆ ಮಾಡಿದ್ದರು. ಅತಿಥಿಗಳಿಗೆ ಟೀ ಪಾರ್ಟಿ ಆಯೋಜನೆ ಮಾಡುವುದಕ್ಕೆ ಹೀಗೆ ಹೇಳಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಉಪಸ್ಥಿತರಿದ್ದರು.

ವೈರಲ್ ಆಗುತ್ತಿರುವ ಫೋಟೋದಲ್ಲಿ ಮೋದಿಯವರು ಅನಂತ್ ನಾಗ್ ಅವರ ಕೈ ಹಿಡಿದುಕೊಂಡು ಅಭಿನಂದನೆ ತಿಳಿಸುತ್ತಿರುವುದು ಕಂಡು ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ