ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್, ಯಾಕೆ ಗೊತ್ತಾ
ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಕೊಡಿ ಎಂದು ಕೇಳಿದ್ರೆ ತಪ್ಪಾಗುತ್ತದೆ. ಹಾಗಾಗಿ, ಕೇಳುವ ಬದಲಾಗಿ ನೆನಪು ಮಾಡುತ್ತೇನೆ. ಈ ಬಾರಿಯೂ ನೆನಪು ಮಾಡಿದ್ದೇನೆ ಎಂದು ಹೇಳಿದರು.
ವಿಷ್ಣುವರ್ಧನ್ ಸಮಾಧಿ ಧ್ವಂಸ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದರ ಬಗ್ಗೆ ಈಗಾಗಲೇ ಸರ್ಕಾರದ ಮತ್ತು ಸಿಎಂ ಗಮನಕ್ಕಿದೆ.
ಹಿಂದೆ ನಾವು ಕೇಳಿದ ಹಾಗೆ ಕರ್ನಾಟಕ ಸರ್ಕಾರ ಅಪ್ಪ ಅವರ ಸ್ಮಾರಕ ಮಾಡಿದ್ದಾರೆ. ಈಗಾಗಲೇ ಸರ್ಕಾರ ಐದು ಎಕರೆ ಜಮೀನಿನಲ್ಲಿ ಸ್ಮಾರಕ ಮಾಡಿದೆ.