ಸೈಬರ್ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಅವಿನಾಶ್
ಖ್ಯಾತ ನಟರಾಗಿರುವ ಅವಿನಾಶ್ ಸಾವನ್ನಪ್ಪಿದ್ದಾರೆ ಎಂದು ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಿದ್ದರು. ಇದು ಅವಿನಾಶ್ ಗಮನಕ್ಕೆ ಬಂದಿದ್ದು, ಇಂತಹ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ದೂರು ನೀಡಿದ್ದಾರೆ.
ಇನ್ನು, ಅವಿನಾಶ್ ಆರೋಗ್ಯವಾಗಿಯೇ ಇದ್ದು, ಜೇಮ್ಸ್ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದರು.