ಡೆವಿಲ್ ಶೂಟಿಂಗ್‌ನಲ್ಲಿರುವ ನಟ ದರ್ಶನ್‌ಗೆ ಮುಗಿಯದ ಸಂಕಷ್ಟ
ಇದಕ್ಕೂ ಮುನ್ನ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಮಾ.18ಕ್ಕೆ ನಡೆಯಬೇಕಿತ್ತು. ವಿಚಾರಣೆಗೆ ಪಟ್ಟಿಯಾಗದ ಹಿನ್ನೆಲೆ ದರ್ಶನ್ ಪ್ರಕರಣದಲ್ಲಿನ ರಾಜ್ಯದ ವಿಶೇಷ ವಕೀಲ ಅನಿಲ್ ನಿಶಾನಿ ಅರ್ಜಿ ವಿಚಾರಣೆ ನಡೆಸುವಂತೆ ಪ್ರಸ್ತಾಪಿಸಿದ್ದರು. ಇದಕ್ಕೆ ಉತ್ತರಿಸಿದ ಕೋರ್ಟ್ ಏ.2 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿತ್ತು.