ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಸೇರಿದಂತೆ 13 ಮಂದಿ ಆರೋಪಿಗಳನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ಪ್ರಕರಣದ ಸಂಬಂಧ ನಟ ದರ್ಶನ್, ಪ್ರದೋಶ್, ಧನರಾಜ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಜೂನ್ 22ರ ವರೆಗೆ ಮತ್ತೇ ಪೊಲೀಸ್ ಕಸ್ಟಡಿಗೆ ಒಳಪಡಿಸಲಾಯಿತು.
ಇನ್ನೂ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ3 ಪವನ್, ಎ 4 ರಾಘವೇಂಧ್ರ, ಎ 5 ನಂದೀಶ, ಎ 6 ಜಗದೀಶ, ಎ 7 ಅನುಕುಮಾರ್ ಹಾಗೂ ಎ8 ರವಿಶಂಕರ್ ಸೇರಿದಂತೆ ಉಳಿದ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. ಅದರಂತೆ ಅವನರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್ ಮಾಡಲಾಗುತ್ತದೆ.
ಇನ್ನೂ ಹೆಚ್ಚಿನ ತನಿಖೆಗೆ ಪೊಲೀಸರ ಮನವಿಯಂತೆ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಮತ್ತೇ ಪೊಲೀಸ್ ಕಸ್ಟಡಿಗೆ ಒಳಪಡಿಸಲಾಯಿತು.
ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ನಟ ದರ್ಶನ್ ಅವರನ್ನು ಇನ್ನೂ ಹೆಚ್ಚಿನ ವಿಚಾರಣೆ ನಡೆಸಬೇಕೆಂದು ಪೊಲೀಸರು ಮನವಿ ಮಾಡಿದ್ದು, ಅದರಂತೆ ಪೊಲೀಸ್ ಕಸ್ಟಡಿಗೆ ಒಳಪಡಿಸಲಾಗಿದೆ.