ನಟ ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಡಿ.6ಕ್ಕೆ ಮುಂದೂಡಿಕೆ

Sampriya

ಮಂಗಳವಾರ, 3 ಡಿಸೆಂಬರ್ 2024 (18:36 IST)
ಬೆಂಗಳೂರು: ಚಿಕಿತ್ಸೆಯ ದೃಷ್ಟಿಯಿಂದ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿರುವ ನಟ ದರ್ಶನ್ ಅವರು ರೆಗ್ಯುಲರ್ ಬೇಲ್‌ಗಾಗಿ ಪ್ರಯತ್ನಿಸುತ್ತಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಕೂಡಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಹೈಕೋರ್ಟ್​ನಲ್ಲಿ ಜಾಮೀನು ಸಲುವಾಗಿ ವಾದ-ಪ್ರತಿವಾದ ನಡೆಯುತ್ತಿದೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಡಿಸೆಂಬರ್​ 6ಕ್ಕೆ ಮುಂದೂಡಲಾಗಿದ್ದು, ಅಲ್ಲಿಯವರೆಗೆ ಪವಿತ್ರಾ ಗೌಡಗೆ ಜೈಲೇ ಗತಿಯಾಗಿದೆ.

ಇನ್ನೂ ಜಾಮೀನು ನೀಡುವ ಸಲುವಾಗಿ ಆರೋಪಿಗಳ ಪರವಾಗಿ ವಕೀಲರ ವಾದ ಮಂಡನೆ ಅಂತ್ಯವಾಗಿದೆ. ಡಿಸೆಂಬರ್​ 6ರಂದು ಜಾಮೀನು ಯಾಕೆ ನೀಡಬಾರದೆಂದು ಎಸ್​ಪಿಪಿ ಪ್ರಸನ್ನ ಕುಮಾರ್​ ಅವರು ಪ್ರತಿವಾದ ಮಂಡಿಸಲಿದ್ದಾರೆ. ಆ ಬಳಿಕ ಜಾಮೀನಿಗೆ ಸಂಬಂಧಿಸಿದ ತೀರ್ಪನ್ನು ಹೈಕೋರ್ಟ್ ನೀಡಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ