ನಾಯಿ ಕಚ್ಚಿದ ಪ್ರಕರಣ: ಇಂದು ಪೊಲೀಸ್ ಠಾಣೆಗೆ ನಟ ದರ್ಶನ್

ಬುಧವಾರ, 15 ನವೆಂಬರ್ 2023 (09:35 IST)
File photo
ಬೆಂಗಳೂರು: ತಮ್ಮ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಇಂದು ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ.

ದರ್ಶನ್ ಮನೆಯ ಬಳಿ ಕಾರು ಪಾರ್ಕ್ ಮಾಡಿದ್ದ ಮಹಿಳೆಗೆ ನಾಯಿ ಕಚ್ಚಿತ್ತು. ಈ ವೇಳೆ ದರ್ಶನ್ ಮನೆಯ ಸಿಬ್ಬಂದಿ ಮತ್ತು ಮಹಿಳೆ ನಡುವೆ ವಾಗ್ವಾದ ನಡೆದಿತ್ತು. ಈ ಸಂಬಂಧ ಮಹಿಳೆ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಈ ಸಂಬಂಧ ದರ್ಶನ್ ಗೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ಇಂದು ಬೆಳಿಗ್ಗೆ ದರ್ಶನ್ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ರನ್ನು ಎರಡನೇ ಆರೋಪಿಯಾಗಿ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ