ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ದೊಡ್ಡಣ್ಣ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿ ತೆಲುಗು ಚಿತ್ರವೊಂದರ ಚಿತ್ರೀಕರಣದಲ್ಲಿ ನಿರತರಾಗಿದ್ದಾಗ ಅಸ್ವಸ್ಥರಾದ ಅವರನ್ನು ತಕ್ಷಣ ಅಲ್ಲಿನ ಆಯುಷ್ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಕುಟುಂಬದವರ ಕೋರಿಕೆ ಮೇರೆಗೆ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ರಾತ್ರಿ ಸುಮಾರು 2.30 ರ ವೇಳೆಗೆ ಆಂಬ್ಯುಲೆನ್ಸ್ ಮೂಲಕ ಅವರನ್ನು ಬೆಂಗಳೂರಿಗೆ ಕರೆ ತರಲಾಗಿದೆ ಎಂದು ವಿಜಯಪುರ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ