ಕನ್ನಡ ಚಿತ್ರರಂಗಕ್ಕೆ ಇನ್ನೊಂದು ಶಾಕ್! ಅಂಕಲ್ ಲೋಕನಾಥ್ ಇನ್ನಿಲ್ಲ!
ಸಂಸ್ಕಾರ ಅವರ ಮೊದಲ ಚಲನಚಿತ್ರವಾಗಿತ್ತು. ಬಳಿಕ ನಾಗರಹಾವು, ಭೂತಯ್ಯನ ಮಗ ಅಯ್ಯು, ಮಿಂಚಿನ ಓಟ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು. ಇಂದು ಮಧ್ಯಾಹ್ನ 12 ಗಂಟೆಯಿಂದ 2.30 ರವರೆಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.