AMMA ಅಧ್ಯಕ್ಷ ಸ್ಥಾನಕ್ಕೆ ಗುಡ್‌ಬೈ ಹೇಳಿದ ನಟ ಮೋಹನ್ ಲಾಲ್

Sampriya

ಮಂಗಳವಾರ, 27 ಆಗಸ್ಟ್ 2024 (16:52 IST)
Photo Courtesy X
ಕೇರಳ: ಹೇಮಾ ಸಮಿತಿಯ ವರದಿಯ ಮೂಲಕ ಮಲಯಾಳಂ ಚಿತ್ರರಂಗದಲ್ಲಿನ ಕರಾಳ ಮುಖದ ಬಗ್ಗೆ ನಟಿ ಮಣಿಯರು ಮೌನ ಮುರಿಯುತ್ತಿದ್ದ ಹಾಗೇ ಖ್ಯಾತ ನಟ ಮೋಹನ್ ಲಾಲ್ ಅವರು ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ಮಲಯಾಳಂ ಚಿತ್ರರಂಗದಲ್ಲಿನ ಬೆಳವಣಿಗೆಗಳು ಇಡೀ ದೇಶವನ್ನು ಬೆಚ್ಚಿ ಬೀಳಿಸುತ್ತಿದೆ. ಇದರ ಬೆನ್ನಲ್ಲೇ ಮೋಹನ್ ಲಾಲ್ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.

 ನಟ ಮೋಹನ್‌ಲಾಲ್ ಅವರು ಮಂಗಳವಾರ ಮಧ್ಯಾಹ್ನ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ಬಗ್ಗೆ ಘೋಷಣೆ ಮಾಡಿದ್ದಾರೆ. ಅವರು ಸಂಘದ ಅಧ್ಯಕ್ಷರಾಗಿದ್ದರು ಮತ್ತು 17 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಹೊಂದಿದ್ದರು. ಆದರೆ, ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು ಜಂಟಿಯಾಗಿ ರಾಜೀನಾಮೆ ಸಲ್ಲಿಸಿದರು.

ಕೆಲವು ಸಮಿತಿಯ ಸದಸ್ಯರ ವಿರುದ್ಧ ಕೆಲವು ನಟಿಯರು ಆರೋಪ ಮಾಡಿರುವ ಹಿನ್ನೆಲೆ ನೈತಿಕ ಆಧಾರದ ಮೇಲೆ ಕಾರ್ಯಕಾರಿ ಸಮಿತಿಯನ್ನು ಚದುರಿಸಲು ಅಮ್ಮ ನಿರ್ಧರಿಸಿದೆ. ಎರಡು ತಿಂಗಳೊಳಗೆ ಚುನಾವಣೆಯ ನಂತರ ಹೊಸ ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎರಡು ತಿಂಗಳೊಳಗೆ ಸಂಘದ ಸಾಮಾನ್ಯ ಸಭೆ ಕರೆದು ನೂತನ ಆಡಳಿತ ಮಂಡಳಿಯನ್ನು ಆಯ್ಕೆ ಮಾಡಲಾಗುವುದು ಎಂದು ಸಂಘ ತಿಳಿಸಿದೆ. "ಸಂಘವನ್ನು ಪುನರುಜ್ಜೀವನಗೊಳಿಸುವ ಮತ್ತು ಬಲಪಡಿಸುವ ಸಾಮರ್ಥ್ಯವಿರುವ ನಾಯಕತ್ವವು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ. ನಮ್ಮ ತಪ್ಪುಗಳನ್ನು ಎತ್ತಿ ತೋರಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಅದು ಸೇರಿಸಿದೆ.

ಏನಿದು ಹೇಮಾ ಸಮಿತಿ ವರದಿ?

ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ. 2017 ರಲ್ಲಿ, ಮಲಯಾಳಂ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ನಂತರ ಸರ್ಕಾರ ಮೂರು ಸದಸ್ಯರ ಆಯೋಗವನ್ನು ರಚಿಸಿತು. ಇದರ ನೇತೃತ್ವವನ್ನು ನ್ಯಾಯಮೂರ್ತಿ ಕೆ ಹೇಮಾ (ನಿವೃತ್ತ), ಮಾಜಿ ಅಧಿಕಾರಿ ಕೆಬಿ ವಲ್ಸಲಕುಮಾರಿ ಮತ್ತು ಹಿರಿಯ ನಟಿ ಶಾರದ ಇತರ ಎರಡು ತಂಡದ ಸದಸ್ಯರಾಗಿದ್ದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ