ಬಾಲಿವುಡ್ ಗೆ ಪಾದಾರ್ಪಣೆ ಮಾಡಲು ಸಜ್ಜಾದ ನಟ ನಾಗ ಚೈತನ್ಯ

ಮಂಗಳವಾರ, 16 ಮಾರ್ಚ್ 2021 (09:09 IST)
ಹೈದರಾಬಾದ್ : ಮುಂಬರುವ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದಲ್ಲಿ ಅಮೀರ್ ಖಾನ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದರಲ್ಲಿ ನಟ ನಾಗ ಚೈತನ್ಯ ಕೂಡ ನಟಿಸುತ್ತಿದ್ದು, ಆ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ ನಟ ನಾಗ ಚೈತನ್ಯ ಅವರು ಈ ಚಿತ್ರದಲ್ಲಿ ನಿರ್ಣಾಯಕ ಪಾತ್ರ ಮಾಡುತ್ತಿದ್ದು, ಮೇ ತಿಂಗಳಿನಲ್ಲಿ ಅವರ ಪಾತ್ರದ ಚಿತ್ರೀಕರಣ ನಡೆಯಲಿದೆ ಎನ್ನಲಾಗಿದೆ.

ಈ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸಬೇಕಿತ್ತು. ಆದರೆ ಡೇಟಿಂಗ್ ಸಮಸ್ಯೆಯ ಕಾರಣ ವಿಜಯ್ ಸೇತುಪತಿ ಚಿತ್ರತಂದಿಂದ ಹೊರಬಂದಿದ್ದಾರೆ. ಹೀಗಾಗಿ ನಟ ಚೈತನ್ಯ ಈ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ