ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ನಟ ಶರಣ್

ಶನಿವಾರ, 26 ಸೆಪ್ಟಂಬರ್ 2020 (15:58 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಟ ಶರಣ್ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಬಂದಿದೆ.


ಶೂಟಿಂಗ್ ಸ್ಪಾಟ್ ನಲ್ಲಿ ತೀವ್ರ ಹೊಟ್ಟೆನೋವಿನಿಂದ ಒದ್ದಾಡಿದ ಶರಣ್ ರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರಣ್ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಸಹೋದರಿ, ನಟಿ ಶ್ರುತಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಆರೋಗ್ಯ ವಿಚಾರಿಸಿದ್ದಾರೆ. ಶೂಟಿಂಗ್ ಗೆಂದು ತೆರಳಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ