ನಟ ಶ್ರೀಮುರಳಿಗೆ ಅಪಘಾತ: ಶಸ್ತ್ರಚಿಕಿತ್ಸೆಗೊಳಗಾಗಲಿರುವ ನಟ

ಶುಕ್ರವಾರ, 13 ಜನವರಿ 2023 (09:00 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಶೂಟಿಂಗ್ ವೇಳೆ ಅಪಘಾತವಾಗಿದ್ದು, ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ಬಘೀರ ಸಿನಿಮಾ ಶೂಟಿಂಗ್ ವೇಳೆ ಈ ಆಘಾತ ಸಂಭವಿಸಿದೆ. ರಾಕ್ ಲೈನ್ ಸ್ಟುಡಿಯೋದಲ್ಲಿ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ.

ಗಂಭೀರ ಗಾಯವಲ್ಲ, ಹಾಗಿದ್ದರೂ ಸದ್ಯದಲ್ಲಿಯೇ ಅವರು ಶಸ್ತ್ರಚಿಕಿತ್ಸೆಗೊಳಗಾಗಬೇಕಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ