ಮದಗಜ ಚಿತ್ರೀಕರಣದ ವೇಳೆ ಅವಘಡ: ನಟ ಶ್ರೀಮುರಳಿಗೆ ಗಾಯ

ಗುರುವಾರ, 8 ಏಪ್ರಿಲ್ 2021 (09:20 IST)
ಬೆಂಗಳೂರು: ಮದಗಜ ಚಿತ್ರದ ಫೈಟಿಂಗ್ ದೃಶ್ಯದ ಚಿತ್ರೀಕರಣ ವೇಳೆ ನಟ, ರೋರಿಂಗ್ ಸ್ಟಾರ್ ಶ್ರೀಮುರಳಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.


ಕಂಠೀರವ ಸ್ಟುಡಿಯೋದಲ್ಲಿ ಮಾಸ್ಟರ್ ಅರ್ಜುನ್ ನೇತೃತ್ವದಲ್ಲಿ ಫೈಟಿಂಗ್ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಮುರಳಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಮದಗಜ ಚಿತ್ರದ ನಾಲ್ಕನೇ ಹಂತದ ಶೂಟಿಂಗ್ ನಡೆಯುತ್ತಿದ್ದು, ಇದೀಗ ನಾಯಕ ನಟನಿಗೆ ಗಾಯವಾಗಿರುವುದರಿಂದ ಶೂಟಿಂಗ್ ಸ್ಥಗಿತಗೊಂಡಿದೆ. ಇನ್ನು, 15 ದಿನ ಶ್ರೀಮುರಳಿ ವಿಶ್ರಾಂತಿ ಪಡೆಯಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ