ನಟ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಅರೆಸ್ಟ್?
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ರ ಗೆಳತಿ ನಟಿ ರಿಯಾ ಚಕ್ರವರ್ತಿ ಅರೆಸ್ಟ್ ಆಗಲಿದ್ದಾರೆ.
ರಿಯಾ ಅವರು ತನಿಖೆಗೆ ಸಹಕರಿಸದಿದ್ದರೆ ಅಥವಾ ತಪ್ಪಿಸಿಕೊಳ್ಳುವ ಉತ್ತರಗಳನ್ನು ನೀಡಿದರೆ, ಆಕೆಯ ಬಂಧನದ ಸಾಧ್ಯತೆಯೂ ಹೆಚ್ಚಾಗುತ್ತದೆ. ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಲಿದೆ ಎಂದು ನನಗೆ ಸಾಕಷ್ಟು ಭರವಸೆ ಇದೆ ಎಂದು ಸುಶಾಂತ್ ಸಿಂಗ್ ತಂದೆ ಪರವಾಗಿ ವಾದ ಮಂಡಿಸುತ್ತಿರುವ ನ್ಯಾಯವಾದಿ ಸಿಂಗ್ ಹೇಳಿದ್ದಾರೆ.
ಜುಲೈ 28 ರಂದು ಬಿಹಾರದಲ್ಲಿ ರಿಯಾ ಚಕ್ರವರ್ತಿ ವಿರುದ್ಧ ದಿವಂಗತ ನಟನ ತಂದೆ ಕೆ.ಕೆ.ಸಿಂಗ್ ಅವರು ಎಫ್ಐಆರ್ ದಾಖಲಿಸಿದ್ದರು.