ಚೆನ್ನೈ : ದೇಶದಲ್ಲಿ ಕೊರೊನಾ 2ನೇ ಅಲೆ ಪ್ರಕರಣ ಹೆಚ್ಚಾಗುತ್ತಿದೆ. ಇದೀಗ ಕಾಲಿವುಡ್ ನ “ಆ್ಯಕ್ಷನ್” ಚಿತ್ರದ ನಟಿ ಐಶ್ವರ್ಯ ಲಕ್ಷ್ಮೀ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ನಟಿ ಐಶ್ವರ್ಯ ಲಕ್ಷ್ಮೀ ಕೊರೊನಾ ರೋಗ ಲಕ್ಷಣಗಳನ್ನು ಹೊಂದಿದ್ದ ಕಾರಣ ಕೊವಿಡ್ ಟೆಸ್ಟ್ ಮಾಡಿಸಿದ್ದಾರೆ, ಆಗ ವರದಿಯಲ್ಲಿ ಪಾಸಿಟಿವ್ ಬಂದಿದೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ ನಟಿ ಕೇರಳದಲ್ಲಿರುವ ತನ್ನ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.