ಉಸಿರಾಟದಲ್ಲಿ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಂತಿ
ಮಂಗಳವಾರ, 27 ಮಾರ್ಚ್ 2018 (06:53 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಅಭಿನಯ ಶಾರದೆ ಎಂದೇ ಖ್ಯಾತಿ ಹೊಂದಿರುವ ಜಯಂತಿ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಕಾರಣ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಯಂತಿ ಅವರು ಹಲವು ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದು, ಸೋಮವಾರ ಬೆಳ್ಳಿಗ್ಗೆ ಅವರಿಗೆ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿ ಅವರ ಪುತ್ರ ಕೃಷ್ಣಕುಮಾರ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಕೃಷ್ಣಕುಮಾರ್ ಅವರು,’ ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಮ್ಮ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅಭಿಮಾನಿಗಳು ಯಾವುದೇ ರೀತಿಯಲ್ಲಿ ಗಾಬರಿಯಾಗೋದು ಬೇಡ. ಅಮ್ಮನ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ. ಸದ್ಯ ವೈದ್ಯಕೀಯ ತಪಾಸಣೆಗಳು ನಡೆಯುತ್ತಿವೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ