ಲಂಡನ್‌ನಲ್ಲೂ ಕನ್ನಡ ಪ್ರೇಮ ಮೆರೆದ ನಟಿ ಪೂಜಾ ಗಾಂಧಿ

Sampriya

ಭಾನುವಾರ, 6 ಅಕ್ಟೋಬರ್ 2024 (19:14 IST)
Photo Courtesy X
ಬೆಂಗಳೂರು: ಮಳೆ ಹುಡುಗಿ ಪೂಜಾ ಗಾಂಧಿ ಮತ್ತು ಪತಿ ವಿಜಯ್ ಘೋರ್ಪಡೆ ಜತೆ ಲಂಡನ್‌ನಲ್ಲಿರುವ ಬಸವೇಶ್ವರ ಪುತ್ಥಳಿಗೆ ನಮಸ್ಕರಿಸಿದರು.

ಬಸವ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೂಜಾ ಗಾಂಧಿ ದಂಪತಿ ಭಾಗಹಿಸಿದ್ದಾರೆ. ಇದೇ ವೇಳೆ ಅಲ್ಲಿನ ಕನ್ನಡ ಸಂಘಗಳು ಈ ಜೋಡಿಯನ್ನು ಸನ್ಮಾನಿಸಿದೆ.

ಮದುವೆಯಾದ ಬಳಿಕ ಪತಿ ಜೊತೆ ಪೂಜಾ ಗಾಂಧಿ ಲಂಡನ್‌ಗೆ ಹಾರಿದ್ದಾರೆ. ಅಲ್ಲಿ ಲಂಡನ್‌ನಲ್ಲಿರುವ 2 ಪ್ರಮುಖ ಕನ್ನಡ ಸಂಸ್ಥೆಗಳಾದ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಮತ್ತು ಬಸವ ಸಮಿತಿ ಜಂಟಿಯಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಮಾನವ ಹಕ್ಕುಗಳು, ಲಿಂಗ ಸಮಾನತೆ ಮತ್ತು ಜಾತಿ ತಾರತಮ್ಯದ ವಿರುದ್ಧದ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳ ಬಗ್ಗೆ ಮಾತನಾಡಿದರು. ತನಗೆ ಬಸವಣ್ಣನ ಬಗ್ಗೆ ಅಪಾರ ಅಭಿಮಾನವಿದೆ ಮತ್ತು ಅವರ ಬೋಧನೆಗಳ ಸಮರ್ಪಿತ ಅನುಯಾಯಿ ಎಂದು ಅವರು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ