ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ ನಟಿ ಶೃತಿ ಹರಿಹರನ್

ಶನಿವಾರ, 27 ಅಕ್ಟೋಬರ್ 2018 (14:18 IST)
ಬೆಂಗಳೂರು : ನಟಿ ಶೃತಿ ಹರಿಹರನ್ ಅವರು ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ.


ನಟಿ ಶೃತಿ ಹರಿಹರನ್ ಅವರು ಸುಮಾರು 5 ಪುಟಗಳಲ್ಲಿ ದೂರನ್ನು ನೀಡಿದ್ದು, ಅದರಲ್ಲಿ ವಿಸ್ಮಯ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಉಲ್ಲೇಖಿಸಿದ್ದಾರೆ. ಯುಬಿ ಸಿಟಿಗೆ ಚಿತ್ರದ ಬಗ್ಗೆ ಮಾತನಾಡಲು ಕರೆದಿದ್ದು, ಊಟಕ್ಕೆ ಕರೆದುಕೊಂಡು ಹೋಗಿದ್ದರು. ಯುಬಿ ಸಿಟಿಯ ಪಬ್‍ವೊಂದರಲ್ಲಿ ಊಟ ಮಾಡಿದ್ದೆವು. ಈ ವೇಳೆ ನನ್ನ ದೇಹ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದರು. ಲೈಂಗಿಕವಾಗಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದರು. ಲೈಂಗಿಕ ತೃಷೆಗಾಗಿ ರೆಸಾರ್ಟ್ ಗೆ ಕರೆದಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಈ ಹಿನ್ನಲೆಯಲ್ಲಿ ಇದೀಗ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಅರ್ಜುನ್ ಸರ್ಜಾ ವಿರುದ್ಧ ಐಪಿಸಿ ಸೆಕ್ಷನ್ 509(ಮಹಿಳೆಗೆ ಅವಮಾನಿಸುವಂತೆ ಮಾತನಾಡುವುದು) 354(ಅತ್ಯಾಚಾರ ಉದ್ದೇಶದಿಂದ ಹಲ್ಲೆ), 354ಎ(ಲೈಂಗಿಕವಾಗಿ ಸಹಕರಿಸಲು ಒತ್ತಾಯ) ಅಡಿ ಎಫ್‍ಐಆರ್ ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ