ಶುಭಪೂಂಜಾಗೆ ಮಾತೃವಿಯೋಗ: ನನ್ನ ಮುಖದ ನಗು ಮಾಯವಾಯಿತು, ನಟಿ ಭಾವುಕ ಫೋಸ್ಟ್‌

Sampriya

ಶುಕ್ರವಾರ, 7 ಮಾರ್ಚ್ 2025 (16:49 IST)
Photo Courtesy X
ಬೆಂಗಳೂರು: ಕನ್ನಡದ ಖ್ಯಾತ ನಟಿ ಶುಭಪೂಂಜಾ ಅವರ ತಾಯಿ ಮಾರ್ಚ್‌ 6ರಂದು ನಿಧನರಾಗಿದ್ದಾರೆ. ತಾಯಿಯ ಅಗಲಿಕೆ ನೆನೆದು ಶುಭಪೂಂಜ ಭಾವುಕವಾಗಿ  ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿದ್ದಾರೆ.

ಅಮ್ಮ ನನ್ನ ನೀನು ಯಾಕೆ ಬಿಟ್ಟು ಹೋದೆ ನೀನು ಇಲ್ಲದೆ ನನಗೆ ಜೀವನವಿಲ್ಲ ನಿನ್ನ ಬಿಟ್ಟು ನನಗೆ ಬದುಕಕ್ಕೆ ಬರೋದು ಇಲ್ಲ 24 ಗಂಟೆ ನಿನ್ನ ಜೊತೇನೆ ಇರುತ್ತಿದ್ದೆ ಈಗ ನಾನು ಏನು ಮಾಡಲಿ ಎಲ್ಲಿ ಹೋಗಲಿ ಯಾರಿಗೋಸ್ಕರ ವಾಪಸ್ ಮನೆಗೆ ಬರಲಿ ನೀನು ನನ್ನ ಯಾಕೆ ಬಿಟ್ಟು ಹೋದೆ ನನ್ನ ಇಡೀ ಜೀವನಕ್ಕೆ ಅರ್ಥವಿಲ್ಲದೆ ಆಯ್ತು ನನ್ನ ಇಡೀ ಜೀವನವೇ ನೀನಾಗಿದ್ದೆ ನನ್ನ ಯಾಕೆ ಬಿಟ್ಟು ಹೋದೆ

I lost my mother on 6th march.. one day back... my life was revolving only around her.. she was my life.. whatever I did it was only around her.. today I stand devastated broken beyond repair.. I cannot imagine a life without her .. my life has absolutely zero meaning without her .. my heart is broken into a million pieces .. because my mom is everything....my life will.never be the same .. and I can never be the same.. my smile is lost mommy...

ಜಾಕ್‌ಪಾಟ್‌ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ ಶುಭ ಅವರು ಮೊಗ್ಗಿನ ಸಿನಿಮಾ ದೊಡ್ಡ ಬ್ರೇಕ್ ತಂದುಕೊಟ್ಟಿತು. ಆಮೇಲೆ ಕನ್ನಡದ ಸಾಲು ಸಾಲು ಸಿನಿಮಾಗಳಲ್ಲಿ ಶುಭ ಅಭಿಯಿಸಿದ್ದಾರೆ. ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಆದ  ಬಿಗ್‌ಬಾಸ್‌ನಲ್ಲೂ ಶುಭಪೂಂಜಾ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶುಭ ಅವರು ತಾಯಿ ಕೂಡಾ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಸದ್ಯ ಶುಭಪೂಂಜಾ ಅವರು ಕಲರ್ಸ್ ಕನ್ನಡ ವಾಹಿನಿಯ ಬಾಯ್ಸ್ ವರ್ಸಸ್ ಗರ್ಲ್ಸ್‌ ರಿಯಾಲಿಟಿ ಶೋನಲ್ಲಿ ಭಾಗವಹಿಸುತ್ತಿದ್ದಾರೆ.





ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ