ಬೆಂಗಳೂರು-2 ದಿನದೊಳಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಟಿ ವಿಜಯಲಕ್ಷ್ಮಿ ವಿಡಿಯೋ ಮೂಲಕ ಹೇಳಿದ್ದಾರೆ. ಅಲ್ಲದೇ ವಿಡಿಯೋವನ್ನ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ.ಸೂರ್ಯವಂಶ, ನಾಗಮಂಡಲ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಸಿನಿರಸಿಕರ ಮನ ಗೆದ್ದ ನಟಿ ವಿಜಯಲಕ್ಷ್ಮಿ ಪರಭಾಷೆಯ ಸಿನಿಮಾಗಳಲ್ಲೂ ಕಾಣಿಸಿಕೊಂಡಿದ್ದಾರೆ. ಇದೀಗ ಅವರು ನಾಮ್ ತಮಿಳರ್ ಪಾರ್ಟಿಯ ಸೀಮಾನ್ ನನಗೆ ಮೋಸ ಮಾಡಿದ್ದಾನೆ ಎಂದು ಆರೋಪ ಮಾಡಿದ್ದಾರೆ.
ನನ್ನ ಸಹೋದರಿಗೆ ಉಂಟಾಗಿದ್ದ ಸಮಸ್ಯೆಯಿಂದಾಗಿ ನಾನು ಮೊದಲ ಬಾರಿಗೆ ಸೀಮಾನ್ ಅವರನ್ನು ಭೇಟಿ ಮಾಡಿದೆ. ಆಗ ಸೀಮಾನ್ ಗೆ ಮದುವೆ ಆಗಿರಲಿಲ್ಲ. ನನ್ನನ್ನು ಮದುವೆ ಆಗುವುದಾಗಿ ಹೇಳಿದ್ದ, ನನ್ನ ಜೊತೆ ಆತ ಮೂರು ವರ್ಷ ಇದ್ದ. ಅಷ್ಟೇ ಅಲ್ಲದೆ ನನ್ನನ್ನು ಗುಟ್ಟಾಗಿ ಮದುವೆ ಕೂಡ ಆಗಿದ್ದಾನೆ. ನನ್ನ ಬದುಕನ್ನೇ ಹಾಳು ಮಾಡಿಬಿಟ್ಟ. ಇದೀಗ ನನ್ನನ್ನು ಒಂಟಿ ಮಾಡಿದ್ದಾನೆ ಎಂದು ವಿಜಯಲಕ್ಷ್ಮಿ ತನ್ನ ಗೋಳು ತೋಡಿಕೊಂಡಿದ್ದಾರೆ.